ಯಕ್ಷ ಸಾಧಕರು 295

"ಕ್ರಿಯಾಶೀಲ‌ ಯಕ್ಷ ಪ್ರತಿಭೆ"

ಯುವ ಜನತೆ ನೃತ್ಯ, ಸಂಗೀತ, ಯಕ್ಷಗಾನ ಮೊದಲಾದ ಕಲಾ ಪ್ರಕಾರಗಳಿಂದ ದೂರ ಉಳಿಯುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿರುವ ಈ ದಿನಗಳಲ್ಲಿ, ಆ ಮಾತಿಗೆ ಅಪವಾದದಂತೆ ಯಕ್ಷಗಾನವನ್ನೇ ತನ್ನ ಜೀವಾಳವನ್ನಾಗಿಸಿ ಯಕ್ಷಗಾನ ರಂಗದಲ್ಲಿ ತಮ್ಮ ಪ್ರತಿಭೆಯ ಮೂಲಕ ಸಂಚಲನ ಮೂಡಿಸುತ್ತಿರುವ ಕಲಾವಿದ ನಾಗರಾಜ ದೇವಾಡಿಗ ಆಲೂರು.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆಲೂರಿನ ಕುಷ್ಟ ದೇವಾಡಿಗ ಹಾಗೂ ಮುತ್ತು ದೇವಾಡಿಗ ಇವರ ಮಗನಾಗಿ 10.01.1990 ರಂದು ಜನನ. 7ನೇ ತರಗತಿವರೆಗೆ ವಿದ್ಯಾಭ್ಯಾಸ. ಸುರೇಂದ್ರ ಆಲೂರು ಹಾಗೂ ಉಮೇಶ್ ಸುವರ್ಣ ಇವರ ಯಕ್ಷಗಾನ ಗುರುಗಳು.



ರಂಗಕ್ಕೆ ಹೋಗುವ ಮೊದಲು ಪ್ರಸಂಗದ ಬಗ್ಗೆ ಯಾವ ರೀತಿಯ ತಯಾರಿ ಮಾಡಿಕೊಳ್ತೀರಾ :-
ಹಿರಿಯ ಕಲಾವಿದರಲ್ಲಿ ಪಾತ್ರದ ವಿವರ ಹಾಗೂ ವ್ಯಾಪ್ತಿ ಆಳವಾಗಿ ತಿಳಿದು, ನನ್ನ ವೇಷದ ಪದ್ಯವನ್ನು ಕೇಳಿ ಪಾತ್ರದ ಸ್ವಭಾವವನ್ನು ಮನನ ಮಾಡಿಕೊಂಡು ತಯಾರಿ ಮಾಡಿಕೊಳ್ಳುತ್ತೇನೆ ಎಂದು ಹೇಳುತ್ತಾರೆ ನಾಗರಾಜ್.
ಪ್ರದೀಪ ಇವರ ನೆಚ್ಚಿನ ವೇಷ.

ಯಕ್ಷಗಾನ ಇಂದಿನ ಸ್ಥಿತಿ ಗತಿ ಹಾಗೂ ಪ್ರೇಕ್ಷಕರ ಬಗ್ಗೆ ಅಭಿಪ್ರಾಯ ಕೇಳಿದಾಗ ಹೀಗೆ ಹೇಳುತ್ತಾರೆ:-
ಬಹುತೇಕ ಪ್ರೇಕ್ಷಕರು ಇಡೀ ರಾತ್ರಿ ಆಟ ನೋಡುವ ಮನಸ್ಥಿತಿ ಇಲ್ಲದಿರುವುದರಿಂದ ಸಮಯ ಮಿತಿ ಪ್ರದರ್ಶನಗಳು ನಡೆಯುತ್ತಿದೆ ಹಾಗೂ ಇತ್ತೀಚೆಗೆ ಮಕ್ಕಳು, ಯುವ ಪ್ರೇಕ್ಷಕರು ಯಕ್ಷಗಾನದ ಕಡೆಗೆ ವಾಲುತ್ತಿರುವುದು ಯಕ್ಷಗಾನಕ್ಕೆ ಪೂರಕ ಬೆಳವಣಿಗೆ.
ಅನೇಕ ಯುವಕರು ಯಕ್ಷಗಾನಕ್ಕೆ ಮಾರುಹೋಗಿ, ಅಭಿಮಾನಿಗಳಾಗುತ್ತಿರುವುದು ಸಂತಸದ ವಿಷಯ. ಕೇವಲ‌ ಮನರಂಜನೆಗೆ ಇಟ್ಟುಕೊಳ್ಳದೇ, ಇಲ್ಲಿ ಸಿಗುವ ಅನೇಕ ವಿಚಾರಾನುಭವಗಳಿಂದ ಸ್ವಾಸ್ಥ್ಯ ಪ್ರಪಂಚದಲ್ಲಿ ಶಿಷ್ಟ ಕಲೆಯ ಮಹತ್ವ ಹೆಚ್ಚುವಂತೆ ಮಾಡಿದರೆ ಒಳ್ಳೆಯದು.





ಯಕ್ಷಗಾನ ರಂಗದಲ್ಲಿ ಮುಂದಿನ ಯೋಜನೆ ಬಗ್ಗೆ ಕೇಳಿದಾಗ ಆಸಕ್ತಿ ಇರುವ ಮಕ್ಕಳಿಗೆ ಯಕ್ಷಗಾನದ ತರಬೇತಿಯನ್ನು ನೀಡಬೇಕು ಎಂಬ ಯೋಜನೆ ಇದೆ ಎಂದು ಹೇಳುತ್ತಾರೆ ನಾಗರಾಜ್.

ಮಾರಣಕಟ್ಟೆ, ಮಂದಾರ್ತಿ, ನೀಲಾವರ, ಪೆರ್ಡೂರು ಮೇಳದಲ್ಲಿ ತಿರುಗಾಟ ಮಾಡಿ ಪ್ರಸ್ತುತ ಹಾಲಾಡಿ ಮೇಳದಲ್ಲಿ ತಿರುಗಾಟ ಮಾಡುತ್ತಿದ್ದಾರೆ ನಾಗರಾಜ ದೇವಾಡಿಗ ಆಲೂರು.

ನಾಗರಾಜ ದೇವಾಡಿಗ ಆಲೂರು ಅವರು 19.05.2022 ರಂದು ಸ್ವಾತಿ ಅವರನ್ನು ಮದುವೆಯಾಗಿ ಮಗ ಅವ್ಯನ ಜೊತೆಗೆ ಸುಖೀ ಸಂಸಾರವನ್ನು ನಡೆಸುತ್ತಿದ್ದಾರೆ.





ತಂದೆ, ತಾಯಿ, ಪತ್ನಿಯ ಪ್ರೋತ್ಸಾಹ, ಗುರುಗಳ ಮಾರ್ಗದರ್ಶನದಿಂದ ಯಕ್ಷಗಾನ ರಂಗದಲ್ಲಿ ಇಂದು ಸಾಧನೆ ಮಾಡಲು ಸಾಧ್ಯವಾಯಿತು ಎಂದು ಹೇಳುತ್ತಾರೆ ನಾಗರಾಜ ದೇವಾಡಿಗ ಆಲೂರು.

ಇವರಿಗೆ ಇವರು ನಂಬಿರುವ ಕಲಾಮಾತೆ ಹಾಗೂ ಕಟೀಲು ಶ್ರೀ ಭ್ರಮರಾಂಬೆ ಕಲೆಯಲ್ಲಿ ಇನ್ನಷ್ಟು ಸಾಧಿಸುವ ಶಕ್ತಿಯನ್ನು‌ ಕರುಣಿಸಲಿ, ಅವರಿಗೆ ಶುಭವನ್ನು ಕರುಣಿಸಲಿ ಎಂದು ಬೇಡುತ್ತಿದ್ದೇವೆ ಹಾಗೂ ಕಲಾಮಾತೆಯು ಸಕಲ ಭಾಗ್ಯಗಳನ್ನೂ ಅನುಗ್ರಹಿಸಲಿ ಎಂದು ಕಲಾಭಿಮಾನಿಗಳೆಲ್ಲರ ಪರವಾಗಿ ಹಾರೈಕೆಗಳು.

📝
ಶ್ರವಣ್ ಕಾರಂತ್ ಕೆ
ಸುಪ್ರಭಾತ
ಶಕ್ತಿನಗರ ಮಂಗಳೂರು.
☎️ :- +91 8317463705

Comments

Popular posts from this blog

ಯಕ್ಷ ಸಾಧಕರು 355

ಯಕ್ಷ ಸಾಧಕರು 380

ಯಕ್ಷ ಸಾಧಕರು 395